ಪ.ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ನಿಧನ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂ ಹಿರಿಯ ನಾಯಕ ಹಾಗೂ ಪೋಲಿಟ್ ಬ್ಯೂರೋ ಸದಸ್ಯರೂ ಆಗಿರು ಬುದ್ಧದೇವ್ ಭಟ್ಟಾಚಾರ್ಯ ಕೊಲ್ಕತ್ತದಲ್ಲಿ ಇಂದು ಬೆಳಿಗ್ಗೆ ನಿಧನ ಹೊಂದಿದರು. ಅವರಿಗೆ ೮೦ ವರ್ಷ ವಯಸ್ಸಾಗಿತ್ತು.

ಅವರು 2000ದಿಂದ 2011ರವರೆಗೆ ಪಶ್ಚಿಮ ಬಂಗಾಳದ 7ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.  ಪಶ್ಚಿಮ ಬಂಗಾಳದಲ್ಲಿ 34 ವರ್ಷಗಳ ಎಡರಂಗದ ಆಡಳಿತದಲ್ಲಿ ಭಟ್ಟಾಚಾರ್ಯ ಅವರು 11 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಎರಡನೇ ಹಾಗೂ ಸಿಪಿಎಂನ ಕೊನೆಯ ಮುಖ್ಯ ಮಂತ್ರಿಯಾಗಿದ್ದರು.

Leave a Reply

Your email address will not be published. Required fields are marked *

You cannot copy content of this page