ಬಂದ್ಯೋಡಿನಲ್ಲಿ ಅಪರಿಚಿತ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ: ಮೃತದೇಹ ಜೀರ್ಣಿಸಿದ ಸ್ಥಿತಿಯಲ್ಲಿ; ಪೊಲೀಸ್ ತನಿಖೆ ಆರಂಭ
ಕುಂಬಳೆ: ಬಂದ್ಯೋಡಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮೃತ ವ್ಯಕ್ತಿ ಯಾರೆಂದು ತಿಳಿಯಲು ಪ್ರಯತ್ನ ನಡೆಯುತ್ತಿದೆ.
ಬಂದ್ಯೋಡಿನ ಹಳಯ ಸರ್ವೀಸ್ ಸ್ಟೇಶನ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದೆ. ನಿನ್ನೆ ಸಂಜೆ ಇಲ್ಲಿಂದ ದುರ್ನಾತ ಬೀರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಅತ್ತ ತೆರಳಿ ನೋಡಿದಾಗ ಮೃತದೇಹ ಕಂಡು ಬಂದಿದೆ. ಮೃತವ್ಯಕ್ತಿಗೆ ಸುಮಾರು 50 ವರ್ಷ ಪ್ರಾಯ ಅಂದಾಜಿಸಲಾಗಿದೆ. ಮೃತದೇಹ ಜೀರ್ಣಿಸಿದ ಸ್ಥಿತಿಯ ಲ್ಲಿದ್ದು, ಮೂರು ದಿನಗಳ ಹಿಂದೆ ಸಾವಿ ಗೀಡಾಗಿರಬಹುದೆಂದು ಅಂದಾಜಿಸ ಲಾಗಿದೆ. ಕರ್ನಾಟಕ ನಿವಾಸಿಯಾಗಿ ರಬಹುದೆಂದು ಸಂಶಯಿಸಲಾಗುತ್ತಿದೆ.
ಇಂದು ಬೆಳಿಗ್ಗೆ ಕುಂಬಳೆ ಪೊಲೀಸರು ತಲುಪಿ ಮೃತದೇಹದ ಮಹಜರು ನಡೆಸಿದ ಬಳಿಕ ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸಾವಿಗೆ ಕಾರಣವೇನೆಂದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿಯಬಹುದಾಗಿದೆ. ಘಟನೆ ಕುರಿತು ತನಿಖೆ ನಡೆಸಲಾಗು ತ್ತಿದೆಯೆಂದು ಪೊಲೀಸರು ತಿಳಿಸಿದ್ದಾರೆ.