ಬದಿಯಡ್ಕ ಮಂಡಲ ಬಿಜೆಪಿ ವಿಕಸಿತ ಭಾರತ ಸಂಕಲ್ಪ ಸಭೆ

ಮುಳ್ಳೇರಿಯ: ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ನಡೆಸದೇ  ಕೇಂದ್ರ ಸರಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವ ರಾಜ್ಯದ ಎಡರಂಗ ಸರಕಾರ ಹಾಗೂ ಐಕ್ಯರಂಗ ರಾಜ್ಯಕ್ಕೆ ಶಾಪವಾಗಿದೆ ಎಂದು ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ನುಡಿದರು. 

ಬಿಜೆಪಿ ಬದಿಯಡ್ಕ ಮಂಡಲ ಸಮಿತಿ ನೇತೃತ್ವದಲ್ಲಿ ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಜರಗಿದ ವಿಕಸಿತ ಭಾರತ ಸಂಕಲ್ಪ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮುಂದಿನ ಚುನಾವಣೆಯಲ್ಲಿ ಬಿಜೆಪಿ ನಿರ್ಣಾಯಕ ಪಕ್ಷವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಜಿಲ್ಲಾ ಪ್ರಭಾರಿ ವಿ.ಕೆ. ಸಜೀವನ್ ಮುಖ್ಯ ಅತಿಥಿಯಾಗಿದ್ದರು. ಮಂಡಲ ಅಧ್ಯಕ್ಷ ಗೋಪಾಲಕೃಷ್ಣ ಮುಂಡೋಳುಮೂಲೆ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಉಪಾಧ್ಯಕ್ಷೆ ಜನನಿ ಎಂ., ಪಂ. ಅಧ್ಯಕ್ಷ ಗೋಪಾಲಕೃಷ್ಣ, ಮಾಜಿ ಜಿಲ್ಲಾ ಉಪಾಧ್ಯಕ್ಷ ಎಂ. ಸುಧಾಮ ಗೋಸಾಡ, ರಾಜ್ಯ ಕೌನ್ಸಿಲ್ ಸದಸ್ಯ ಶಿವಕೃಷ್ಣ ಭಟ್, ಹರೀಶ್ ನಾರಂಪಾಡಿ ಮಾತನಾಡಿದರು. ಮಂಡಲ ಪ್ರಧಾನ ಕಾರ್ಯದರ್ಶಿ ರವೀಂದ್ರ ರೈ ಗೋಸಾಡ ಸ್ವಾಗತಿಸಿ, ಕಾರ್ಯದರ್ಶಿ ಹರೀಶ್ ಗೋಸಾಡ ವಂದಿಸಿದರು.

You cannot copy contents of this page