ಬದಿಯಡ್ಕ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಸಭೆ ನಾಳೆ
ಬದಿಯಡ್ಕ: ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್‌ನ ಕಾಸರಗೋಡು ಜಿಲ್ಲಾ ಸಮಿತಿ ಆಶ್ರಯದಲ್ಲಿ ನೂತನವಾದ ‘ಅರಿವು’ ಯೋಜನೆಗೆ ನಾಳೆ ಮಧ್ಯಾಹ್ನ 2 ಗಂಟೆಗೆ ಬದಿಯಡ್ಕದ ಶ್ರೀ ಭಾರತೀ ವಿದ್ಯಾಪೀಠ ಶಿಕ್ಷಣ ಸಂಸ್ಥೆಯಲ್ಲಿ ಚಾಲನೆ ನೀಡಲಾಗುವುದು. ಜಿಲ್ಲೆಯ ಕನ್ನಡಿಗ ವಿದ್ಯಾರ್ಥಿಗಳಿಗೆ ಹಾಗೂ ಉದ್ಯೋಗಾರ್ಥಿಗಳಿಗೆ ಅಗತ್ಯ ವಿಚಾರಗಳಲ್ಲಿ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡುವುದು ಇದರ ಉದ್ದೇಶವಾಗಿದೆ. ‘ಎಸ್‌ಎಸ್‌ಎಲ್‌ಸಿ ನಂತರ ಮುಂದೇನು’ ಎಂಬ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗುವುದು. ಕಾರ್ಯಕ್ರಮವನ್ನು ಶಿಕ್ಷಣ ತಜ್ಞ ವಿ.ಬಿ. ಕುಳಮರ್ವ ಉದ್ಘಾಟಿಸುವರು. ನಿವೃತ್ತ ಪ್ರಾಂಶುಪಾಲ ಡಾ. ಬೇ.ಸಿ. ಗೋಪಾಲಕೃಷ್ಣ ಭಟ್ ಅಧ್ಯಕ್ಷತೆ ವಹಿಸುವರು. ಹಲವರು ಭಾಗವಹಿಸುವರು.