ಬಸ್‌ನಲ್ಲಿ ಸಾಗಿಸುತ್ತಿದ್ದ 30 ಕಿಲೋ ಪಾನ್ ಮಸಾಲೆ ವಶ: ಓರ್ವ ಸೆರೆ
ಉಪ್ಪಳ: ಮಂಗಳೂರು ಭಾಗದಿಂದ ಕಾಸರಗೋಡು ಭಾಗಕ್ಕೆ ಮಾದಕವಸ್ತು ಸಾಗಾಟ ತೀವ್ರಗೊಂಡಿದ್ದು, ಈ ಹಿನ್ನೆಲೆಯಲ್ಲಿ ಅದರ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದರಂತೆ ಇಂದು ಬೆಳಿಗ್ಗೆ ನಡೆಸಿದ ಕಾರ್ಯಾಚರಣೆ ವೇಳೆ ಉಪ್ಪಳ ಭಾಗಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಾಗಿಸುತ್ತಿದ್ದ 30 ಕಿಲೋ ಪಾನ್‌ಮಸಾ ಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಉತ್ತರ ಪ್ರದೇಶ ನಿವಾಸಿ ಶೈಲೇಶ್ ಸೋಂಕಾರ್ (20) ಎಂ ಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಿಗ್ಗೆ 7 ಗಂಟೆ ವೇಳೆ ತಲಪಾಡಿಯಲ್ಲಿ ಪೊಲೀಸರು, ಶ್ವಾನದಳ ನಡೆಸಿದ ಕಾರ್ಯಾಚರಣೆಯಲ್ಲಿ ಪಾನ್ ಮಸಾಲೆ ಪತ್ತೆಹಚ್ಚಲಾಗಿದೆ.