ಬಾಯಾರುಪದವು: ವಿದ್ಯುತ್ ವೋಲ್ಟೇಜ್ ಸಮಸ್ಯೆ ಪರಿಹಾರಕ್ಕೆ ಮನವಿ
ಬಾಯಾರುಪದವು: ಬೋಳುಕಟ್ಟೆ, ಬಾಯಾರುಪದವು ನಿವಾಸಿಗಳ ವಿದ್ಯುತ್ ವೋಲ್ಟೇಜ್ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿ ಸಿಪಿಎಂ ಬಾಯಾರು ಲೋಕಲ್ ಸಮಿತಿ ನೇತೃತ್ವದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ವಿದ್ಯುತ್ ಇಲಾಖೆ ಸಚಿವ ಕೆ. ಕೃಷ್ಣನ್ ಕುಟ್ಟಿ ಅವರಿಗೆ ಮನವಿ ಸಮರ್ಪಿಸಲಾಗಿದೆ. ಈ ಪ್ರದೇಶದಲ್ಲಿ ಸುಮಾರು ೨೦ ಮನೆಗಳು ಹಲವು ಕಾಲದಿಂದ ವಿದ್ಯುತ್ ವೋಲ್ಟೇಜ್ ಸಮಸ್ಯೆಯನ್ನು ಅನುಭವಿಸುತ್ತಿದ್ದು, ಇದರ ಪರಿಹಾರಕ್ಕೆ ಶೀಘ್ರ ಕ್ರಮ ಕೈಗೊಳ್ಳ ಬೇಕೆಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.