ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಮದ್ರಸಾ ಅಧ್ಯಾಪಕನಿಗೆ ಸಜೆ, ಜುಲ್ಮಾನೆ
ಕಾಸರಗೋಡು: ಅಪ್ರಾಪ್ತ ಬಾಲಕನಿಗೆ ಸಲಿಂಗರತಿ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾ ಗಿರುವ ಮದ್ರಸಾ ಅಧ್ಯಾಪಕನಿಗೆ ಹೊಸದುರ್ಗ ಫಾಸ್ಟ್ ಟ್ರಾಕ್ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ 1 ವರ್ಷ ಸಜೆ ಹಾಗೂ 10,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ನೀರ್ಚಾಲು ಪೆರಡಾಲದ ಮುಹಮ್ಮದ್ ಅಜ್ಮಲ್ (32) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಮೂರು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆಯೆಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
2022 ಜೂನ್ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ಅಂದು ಈ ಠಾಣೆಯ ಇನ್‌ಸ್ಪೆಕ್ಟರ್ ಆಗಿದ್ದ ಕೆ. ಲೀಲಾ ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರ ಸ್ಪೆಷಲ್ ಪ್ರೋಸಿಕ್ಯೂಟರ್ ಎ. ಗಂಗಾಧರನ್ ನ್ಯಾಯಾಲಯದಲ್ಲಿ ವಾದಿಸಿದ್ದರು.