ಬಾಲಕಿಗೆ ದೋತಿ ಎತ್ತಿ ತೋರಿಸಿದ ವ್ಯಕ್ತಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಮುಳ್ಳೇರಿಯ: ಮದ್ರಸ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ 14ರ ಬಾಲಕಿಗೆ ಧೋತಿ ಎತ್ತಿ ತೋರಿಸಿ ಅಸಹ ರೀತಿಯಲ್ಲಿ ವರ್ತಿಸಿದ ವ್ಯಕ್ತಿ ವಿರುದ್ಧ ಆದೂರು ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂ ಡಿದ್ದಾರೆ. ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ಈ ಘಟನೆ ನಡೆದಿದೆ. ಬಾಲಕಿ ಮನೆಗೆ ಹಿಂತಿರುಗುತ್ತಿದ್ದ ದಾರಿ ಮಧ್ಯೆ ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೋರ್ವ ಆಕೆಯ ಮುಂದೆ ಈ ರೀತಿ ಅಸಹ ರೀತಿಯಲ್ಲಿ ವರ್ತಿಸಿದ ನೆಂದು ಪೊಲೀಸರಿಗೆ ನೀಡಲಾದ ದೂರಿನಲ್ಲಿ ಆರೋಪಿಸಲಾಗಿದೆ.