ಬಿಜೆಪಿ ಮಹಿಳಾ ಸಮಾವೇಶ ನಾಳೆ

ಕುಂಬಳೆ: ಕಾಸರಗೋಡು ಲೋಕ ಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಂ.ಎಲ್ ಅಶ್ವಿನಿ ಪಜ್ವ ರವರ ಚುನಾವಣಾ ಪ್ರಚಾ ರಾರ್ಥವಾಗಿ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದ ಮಹಿಳಾ ಸಮಾವೇಶ ನಾಳೆ ಮಧ್ಯಾಹ್ನ 2.30ಕ್ಕೆ ಕುಂಬಳೆ ಕೋ ಆಪರೇಟಿವ್ ಬ್ಯಾಂಕ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದ ಸಂಚಾಲಕಿ ಪ್ರೇಮಲತಾ .ಎಸ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾವೇಶವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕುಮಾರಿ ಬಾಗೀರಥಿ ಮುರುಳ್ಯ ಉದ್ಘಾಟಿ ಸುವರು. ಬಿಜೆಪಿ ರಾಜ್ಯ ಕಾರ್ಯದರ್ಶಿ ಅಡ್ವಕೇಟ್ ಶ್ರೀಕಾಂತ್ ಪ್ರಧಾನ ಭಾಷಣ ಮಾಡುವರು. ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ಮೊದಲಾದವರು ಭಾಗವಹಿಸುವರು.

RELATED NEWS

You cannot copy contents of this page