ಬಿಜೆಪಿ ಸಂಸದ ಕೆ. ಶ್ರೀನಿವಾಸ ಪ್ರಸಾದ್ ನಿಧನ
ಬೆಂಗಳೂರು: ಅನಾರೋಗ್ಯ ದಿಂದ ಬಳಲುತ್ತಿದ್ದ ಚಾಮರಾಜನಗರದ ಹಾಲಿ ಬಿಜೆಪಿ ಸಂಸದ ಹಾಗೂ ಮಾಜಿ ಕೇಂದ್ರ ಸಚಿವರೂ ಆಗಿದ್ದ ವಿ. ಶ್ರೀನಿವಾಸ ಪ್ರಸಾದ್ ನಿಧನರಾದರು. ಇವರನ್ನು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಅದು ಫಲಕಾರಿಯಾಗದೆ ಇಂದು ಮುಂಜಾನೆ ಅವರು ನಿಧನರಾಗಿದ್ದಾರೆ.
ಶ್ರೀನಿವಾಸ ಪ್ರಸಾದ್ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆರು ಬಾರಿ ಸಂಸದರಾಗಿಯೂ, ನಂಜನಗೂಡು ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿಯೂ ಆಯ್ಕೆಗೊಂ ಡಿದ್ದರು. ಮೂಲತಃ ರಾಷ್ಟ್ರೀಯ ಕಾಂಗ್ರೆಸ್‌ನಿಂದ ಬಂದ ಅವರು 2013ರಲ್ಲಿ ನಂಜನಗೂಡು ಶಾಸಕರಾಗಿ ಗೆದ್ದು 2014ರ ವರೆಗೆ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ರಾಜ್ಯ ಸರಕಾರದಲ್ಲಿ ಕಂದಾಯ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ 2016ರಲ್ಲಿ ಬಿಜೆಪಿ ಸೇರಿದ್ದರು. ಅದಕ್ಕಿಂತ ಮೊದಲು ಅವರು ಅಟಲ್ ಬಿಹಾರಿ ನೇತೃತ್ವದ ಕೇಂದ್ರ ಸರಕಾರದಲ್ಲಿ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.