ಭಯೋತ್ಪಾದಕ ದಾಳಿಯಲ್ಲಿ 20 ಸಾವಿರ ಭಾರತೀಯರು ಬಲಿ: ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನ ವಿರುದ್ದ ಭಾರತ ವಾಗ್ದಾಳಿ

ದೆಹಲಿ: ಕಳೆದ ನಾಲ್ಕು ದಶಕಗಳಲ್ಲಿ ಪಾಕಿಸ್ತಾನದ ಪ್ರಾಯೋಜಕತ್ವದಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 20 ಸಾವಿರಕ್ಕೂ ಹೆಚ್ಚು ಭಾರತೀಯರು ಸಾವನ್ನಪ್ಪಿದ್ದಾರೆಂದು ವಿಶ್ವಸಂಸ್ಥೆಯಲ್ಲಿ ಭಾರತ ಪಾಕಿಸ್ತಾನದ ವಿರುದ್ದ ವಾಗ್ದಾಳಿ ನಡೆಸಿದೆ. ವಿಶ್ವಸಂಸ್ಥೆಯಲ್ಲಿ ಭಾರತ ಖಾಯಂ ಪ್ರತಿನಿಧಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ಈ ವಿಷಯವನ್ನು ವಿಶ್ವಸಂಸ್ಥೆಯ ಗಮನಕ್ಕೆ ತಂದಿದ್ದಾರೆ.

ಭಾರತದಲ್ಲಿ ಪಾಕಿಸ್ತಾನ ಪ್ರಾಯೋಜಿತ  ಗಡಿಯಾಚೆಗಿನ ಭಯೋತ್ಪಾದನೆಯು ನಾಗರಿಕರ ಜೀವನ, ಧಾರ್ಮಿಕ ಸಾಮರಸ್ಯ ಮತ್ತು ಆರ್ಥಿಕ ಸಮೃದ್ಧಿಯನ್ನು ಒತ್ತೆಯಾಳು ಗಳಾಗಿ ಇರಿಸಲು ಪ್ರಯತ್ನಿಸುತ್ತಿದೆ ಎಂದೂ ಅವರು ಹೇಳಿದರು.

RELATED NEWS
ಬದಿಯಡ್ಕದಲ್ಲಿ ಹಸಿರು ಕ್ರಿಯಾಸೇನೆಯಲ್ಲೂ ವಂಚನೆ: 4,000 ರೂ. ಯೂಸರ್ ಫೀಸ್ ಬ್ಯಾಂಕ್‌ನಲ್ಲಿ ಪಾವತಿಸಿ ಪಂ. ಕಚೇರಿಯಲ್ಲಿ ನೀಡಿದ ರಶೀದಿಯಲ್ಲಿ 40,000 ವಾಗಿ ತಿದ್ದುಪಡಿ; ಮಹಿಳಾ ಅಸೋಸಿಯೇಶನ್ ವಿಲ್ಲೇಜ್ ಅಧ್ಯಕ್ಷೆ ಸಹಿತ ಇಬ್ಬರನ್ನು ಕೆಲಸದಿಂದ ತೆರವು

You cannot copy contents of this page