ಭಾರತೀಯ ರಾಜ್ಯ ಪೆನ್ಶನರ್ಸ್ ಮಹಾಸಂಘ ಕುಟುಂಬ ಸಂಗಮ
ಕಾಸರಗೋಡು: ಭಾರತೀಯ ರಾಜ್ಯ ಪೆನ್ಶನರ್ಸ್ ಮಹಾಸಂಘ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ತೈರೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಕುಟುಂಬ ಸಂಗಮ ಜರಗಿತು. ಸರಕಾರದ ನಿವೃತ್ತ ಕಾರ್ಯದರ್ಶಿ ಗೋಪಾಲಕೃಷ್ಣ ಭಟ್ ಐಎಎಸ್ ಉದ್ಘಾಟಿಸಿದರು. ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಎ.ಸಿ. ಗೋಪಿನಾಥ್ ಪ್ರಧಾನ ಭಾಷಣ ಮಾಡಿದರು. ದೇಶೀಯ ಉಪಾಧ್ಯಕ್ಷ ನಿವೃತ್ತ ಸಿಐ ಬಾಲಕೃಷ್ಣ ಕೆ. ಶುಭ ಕೋರಿದರು. ಜಿಲ್ಲಾಧ್ಯಕ್ಷ ಬಾಲಕೃಷ್ಣ ಮಲ್ಲಿಗೆಮಾಡು ಅಧ್ಯಕ್ಷತೆ ವಹಿಸಿದರು. ದೇಶೀಯ ಮಾಜಿ ಕೋಶಾಧಿಕಾರಿ ಎನ್. ಜನಾರ್ದನನ್ ಸ್ವಾಗತಿಸಿ, ಜಿಲ್ಲಾ ಕಾರ್ಯದರ್ಶಿ ಸಿ.ಎಚ್. ಜಯೇಂದ್ರ ವಂದಿಸಿದರು. ಕುಟುಂಬ ಸದಸ್ಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮ ಜರಗಿತು.