ಮಂಜೇಶ್ವರದ ಚುನಾವಣಾ ತಕರಾರು ಪ್ರಕರಣ: ವಿಚಾರಣೆ ಮುಂದೂಡಿಕೆ
ಕಾಸರಗೋಡು: ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಲಂಚ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ದಾಖಲಿ ಲಾದ ಪ್ರಕರಣದ ವಿಚಾರಣೆಯನ್ನು ಕಾಸರಗೋಡು ಪ್ರಿನ್ಸಿಪಲ್ ಜಿಲ್ಲಾ ಸೆಶನ್ಸ್ ನ್ಯಾಯಾಲಯ ಜುಲೈ 11ಕ್ಕೆ ಮುಂದೂಡಿದೆ.
ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಬಿಜೆಪಿಯ ಆರು ನೇತಾರರನ್ನು ಈ ಪ್ರಕರಣದಲ್ಲಿ ಆರೋಪಿಗಳನ್ನಾಗಿ ಹೆಸರಿಸಲಾಗಿದೆ. ಕಳೆದ ಬಾರಿ ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿಎಸ್‌ಪಿ ಉಮೇದ್ವಾರರಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ಎರಡು ಲಕ್ಷ ರೂ. ನಗದು ಮತ್ತು ಮೊಬೈಲ್ ಫೋನ್ ನೀಡಿ ಅವರ ನಾಮಪತ್ರವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾ ಯಿತೆಂದು ಆರೋಪಿಸಿ ನೀಡಲಾದ ದೂರಿನಂತೆ ಬದಿಯಡ್ಕ ಪೊಲೀ ಸರು ಮೊದಲು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಆ ಪ್ರಕರಣದ ತನಿಖೆಯನ್ನು ಜಿಲ್ಲಾ ಕ್ರೈಮ್ ಬ್ರಾಂಚ್‌ಗೆ ಹಸ್ತಾಂತರಿ ಲಾಗಿತ್ತು. ಅದರಂತೆ ಕ್ರೈಮ್ ಬ್ರಾಂಚ್ ವಿಭಾಗದ ಬಳಿಕ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು.
ತಮ್ಮ ವಿರುದ್ಧ ದಾಖಲಿ ಲಾಗಿರುವ ಪ್ರಕರಣದಲ್ಲಿ ಹೊರಿಸ ಲಾಗಿರುವ ಆರೋಪಗಳೆಲ್ಲವೂ ವಾಸ್ತವ ವಿರುದ್ಧವಾದುದೆಂದೂ, ಕಾನೂನು ಪರವಾಗಿ ಅದು ನೆಲೆಗೊಳ್ಳದೆಂದು ಆದರಿಂದ ಈ ಪ್ರಕರಣವನ್ನು ರದ್ದುಪಡಿಸಬೇಕೆಂದು ಕೋರಿ ಬಳಿಕ ಕೆ. ಸುರೇಂದ್ರನ್ ಸೇರಿದಂತೆ ಇತರ ಆರು ಮಂದಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ಈಗ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇದರ ವಿಚಾರಣೆ ನಿನ್ನೆ ಪುನರಾರಂಭಗೊಳ್ಳಬೇಕಾಗಿತ್ತು. ಅದನ್ನು ನ್ಯಾಯಾಲಯ ಬಳಿಕ ಜುಲೈ 11ಕ್ಕೆ ಮುಂದೂಡಿದೆ.