ಮಂಜೇಶ್ವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

ಹೊಸಂಗಡಿ: ಮಂಜೇಶ್ವರದ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ನಿನ್ನೆ ಹೊಸಂ ಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ನಡೆಯಿತು. ಕನಿಲ ಶ್ರೀ ಭಗವತೀ ಕ್ಷೇತ್ರದ ದೊಡ್ಡ ಕಾರ್ನವರ್ ಬಿಡುಗಡೆಗೊಳಿಸಿದರು. ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ನ್ಯಾಯವಾದಿ ನವೀನ್‌ರಾಜ್ ಅಧ್ಯಕ್ಷತೆ ವಹಿಸಿದರು. ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಪದ್ಮನಾಭ ಕಡಪ್ಪರ, ಉತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಸುರೇಶ್ ಗಾಣಿಂಜಾಲ್, ಕೋಶಾಧಿಕಾರಿ ನರೇಂದ್ರ ಹೆಗಡೆ, ಸಂಘಟನಾ ಕಾರ್ಯದರ್ಶಿ ಹರೀಶ್ ಶೆಟ್ಟಿ ಮಾಡ ಉಪಸ್ಥಿತರಿದ್ದರು.

RELATED NEWS

You cannot copy contents of this page