ಮಗುವಿಗೆ ಜನ್ಮ ನೀಡಿದ ಹದಿನಾಲ್ಕರ ಬಾಲಕಿ
ಕಾಸರಗೋಡು: ಹೊಸ ದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ 14ರ ಹರೆಯದ ಬಾಲಕಿ ಮಗುವಿಗೆ ಜನ್ಮ ನೀಡಿದ ಬಗ್ಗೆ ವರದಿ ಯಾಗಿದೆ. ರಕ್ತದೊತ್ತಡ ಉಂಟಾದ ಹಿನ್ನೆಲೆಯಲ್ಲಿ ಬಾಲಕಿ ಹಾಗೂ ಮಗುವನ್ನು ಕಾಞಂಗಾಡ್‌ನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾ ಗಿದೆ. ಆಸ್ಪತ್ರೆ ಅಧಿಕಾರಿಗಳು ನೀಡಿದ ಮಾಹಿತಿಯಂತೆ ಹೊಸದುರ್ಗ ಪೊಲೀಸರು ಆಸ್ಪತ್ರೆಗೆ ತಲುಪಿ ತನಿಖೆ ಆರಂಭಿಸಿದ್ದಾರೆ. ಮಗುವಿಗೆ ಜನ್ಮ ನೀಡಿದ ಬಾಲಕಿ ೧೦ನೇ ತರಗತಿ ವಿದ್ಯಾರ್ಥಿನಿಯಾಗಿ ದ್ದಾಳೆಂದು ಹೇಳಲಾಗುತ್ತಿದೆ.