ಮಧೂರು ಬ್ರಹ್ಮಕಲಶೋತ್ಸವ: ಕಾಸರಗೋಡು ಪ್ರಾದೇಶಿಕ ಸಮಿತಿ ರೂಪೀಕರಣ ಸಭೆ 10ರಂದು
ಕಾಸರಗೋಡು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನವೀಕರಣ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆ ಮುಂದಿನ ಮಾರ್ಚ್ 27ರಿಂದ ನಡೆಯಲಿದ್ದು, ಇದರ ಯಶಸ್ವಿಗೆ ಕಾಸರಗೋಡು ನಗರಸಭಾ ವ್ಯಾಪ್ತಿಯ ಪ್ರಾದೇಶಿಕ ಸಮಿತಿ ರೂಪೀಕರಣ ಸಭೆ 10ರಂದು ಸಂಜೆ 5 ಗಂಟೆಗೆ ನಡೆಯಲಿದೆ. ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸಭೆ ಜರಗಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಬಂಧಪಟ್ಟವರು ತಿಳಿಸಿದ್ದಾರೆ.