ಮನೆಯಂಗಳದಲ್ಲಿದ್ದ ಸ್ಕೂಟರ್ ಬೆಂಕಿಗಾಹುತಿ

ಕಾಸರಗೋಡು: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಬೆಂಕಿಗಾಹುತಿಯಾದ ಘಟನೆ ಪೆರಿಯ ಕುಣಿಯದಲ್ಲಿ ನಡೆದಿದೆ. ಇಲ್ಲಿನ ನವೋದಯ ನಗರದ ಹಸೀನರ ಮಾಲಕತ್ವದಲ್ಲಿರುವ ಸ್ಕೂಟರ್ ಉರಿದು ನಾಶಗೊಂಡಿದೆ. ನಿನ್ನೆ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದ್ದು, ವಿಷಯ ತಿಳಿದು ಬೇಕಲ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ಸ್ಕೂಟರ್‌ಗೆ ಯಾರೋ ಕಿಚ್ಚಿಟ್ಟಿರಬಹುದೆಂದು ಅಂದಾಜಿಸಲಾಗಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿರು ವುದಾಗಿ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page