ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ
ಕಾಸರಗೋಡು: ಏಕಾಂಗಿಯಾಗಿ ವಾಸಿಸುತ್ತಿದ್ದ ಮಹಿಳೆ ಮನೆಯೊಳಗೆ ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾರೆ. ಪಾಣತ್ತೂರು ನೇರೋಡಿ ನಿವಾಸಿ ಪಿಲಾಂಕು ನಾಯ್ಕ್ ಎಂ ಬವರ ಪತ್ನಿ ಪಾರ್ವತಿ ಬಾಯ್ (66) ಮೃತ ಮಹಿಳೆ. ನಿನ್ನೆ ಸಂಜೆ ವರೆಗೆ ಮನೆಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನೆರೆ ಮನೆ ನಿವಾಸಿಗಳು ನೋಡಿದಾಗ ಮನೆಯೊಳಗೆ ಪಾರ್ವತಿ ಬಾಯ್ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ತಲುಪಿಸಿದ್ದು, ಅಷ್ಟರೊಳಗೆ ಸಾವು ಸಂಭವಿಸಿತ್ತೆನ್ನಲಾಗಿದೆ. ಘಟನೆಗೆ ಸಂಬಂಧಿಸಿ ರಾಜಪುರಂ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿ ಸಿಕೊಂಡಿದ್ದಾರೆ.