ಮಹಿಳೆಯರ ಮುಂದೆ ನಗ್ನತೆ ಪ್ರದರ್ಶನ: ವ್ಯಕ್ತಿ ವಿರುದ್ಧ ಕೇಸು
ಕಾಸರಗೋಡು: ಮಹಿಳೆಯರ ಮುಂದೆ ನಗ್ನತೆ ಪ್ರದರ್ಶಿಸುತ್ತಿದ್ದ ವ್ಯಕ್ತಿ ವಿರುದ್ಧ ಮೇಲ್ಪರಂಬ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕಳನಾಡು ಚಾತಂಗೈಯ ಸಂತೋಷ್ ಎಂಬಾತನ ವಿರುದ್ಧ ಕೇಸು ದಾಖಲಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈತ ಹಿಳೆಯರನ್ನು ಕಂಡಾಗ ನಗ್ನತೆ ಪ್ರದರ್ಶಿಸುತ್ತಿರುವುದಾಗಿ ಆರೋಪಿಸಿ ಮಹಿಳೆಯೋರ್ವೆ ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಕೇಸು ದಾಖಲಿಸಿಕೊಂಡಿದ್ದು ಆರೋಪಿಯನ್ನು ಬಂಧಿಸಲು ಪ್ರಯತ್ನ ಆರಂಭಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.