ಮುಸ್ಲಿಂಲೀಗ್ ಜಿಲ್ಲಾ ಕಚೇರಿ ಕಟ್ಟಡಕ್ಕೆ ಶಿಲಾನ್ಯಾಸ
ಕಾಸರಗೋಡು: ಮುಸ್ಲಿಂಲೀಗ್ ಜಿಲ್ಲಾ ಕಚೇರಿ ಕಟ್ಟಡದ ಶಿಲಾನ್ಯಾಸವನ್ನು ಮುಸ್ಲಿಂಲೀಗ್ ರಾಜ್ಯ ಅಧ್ಯಕ್ಷ ಪಾಣಕ್ಕಾಡ್ ಸಾದಿಖಲಿ ಶಿಹಾಬ್ ತಂಙಳ್ ನಿರ್ವಹಿಸಿದರು. ಜಿಲ್ಲಾ ಸಮಿತಿ ಅಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಎ. ಅಬ್ದುಲ್ ರಹ್ಮಾನ್ ಸ್ವಾಗತಿಸಿದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ.ಕೆ. ಕುಂಞಾಲಿಕುಟ್ಟಿ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ರಾಜ್ಯ ಕಾರ್ಯದರ್ಶಿ ಪಿ.ಎಂ.ಎ. ಸಲಾಂ, ಸಿ.ಟಿ. ಅಹಮ್ಮದಾಲಿ ಸಹಿತ ಹಲವು ಮುಖಂಡರು ಭಾಗವಹಿಸಿದರು.