ಮೂರು ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಹೊಸದಿಲ್ಲಿ: ಪಂಚ ರಾಜ್ಯ ಚುನಾವಣೆಗಳ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮೂರು ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ರಮಣ್ ಸಿಂಗ್, ಮಧ್ಯಪ್ರದೇಶದ ಹಾಲಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಹಲವು ಸಂಸದರಿಗೆ ಬಿಜೆಪಿ ಟಿಕೆಟ್ ನೀಡಿದೆ.

ಛತ್ತೀಸ್‌ಗಢದಲ್ಲಿ ೬೪ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಜೆಪಿ ಬಿಡುಗಡೆ ಮಾಡಿದೆ. ಇದರಿಂದ ಒಟ್ಟು ಅಭ್ಯರ್ಥಿಗಳ ಸಂಖ್ಯೆ ೮೫ಕ್ಕೇರಿದೆ. ರಾಜಸ್ಥಾನದಲ್ಲಿ ೪೧ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಹಾಲಿ ಸಂಸದ ರಾಜ್ಯವರ್ದನ್ ಸಿಂಗ್ ರಾಥೋಡ್ ಸಹಿತ ಏಳು ಮಂದಿ ಸಂಸದರು ಒಳಗೊಂಡಿದ್ದಾರೆ. ಮಧ್ಯಪ್ರದೇಶದಲ್ಲಿ ೫೭ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

RELATED NEWS

You cannot copy contents of this page