ರಸ್ತೆ ಮಧ್ಯೆಯಿದ್ದ ಲಾರಿಯ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಸವಾರ ಗಂಭೀರ
ಮಂಜೇಶ್ವರ: ತೂಮಿನಾಡು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಮಧ್ಯೆದಲ್ಲಿ ಲಾರಿಯೊಂದಕ್ಕೆ ಬೈಕ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸವಾರ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ೮ ಗಂಟೆಗೆ ತಲಪ್ಪಾಡಿಯಿಂದ ಉದ್ಯಾವರ ಭಾಗಕ್ಕೆ ಆಗಮಿಸಿದ ವೇಳೆ ಅಪಘಾತ ಸಂಭವಿಸಿದೆ. ಉದ್ಯಾವರ ಬಿ.ಎಸ್. ನಗರ ನಿವಾಸಿ ಇಸ್ಮಾಯಿಲ್‌ರ ಪುತ್ರ ರಜಾಕ್ ಬಿ.ಕೆ. (44) ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಬ್ರೇಕ್ ಫೈಲ್ ಆದ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆ ಮಧ್ಯೆದಲ್ಲೇ ನಿಂತಿತ್ತು ಎನ್ನಲಾಗಿದೆ.