ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ತಿರುವನಂತಪುರ: ರಾಜ್ಯದಲ್ಲಿ ಇಂದಿನಿಂದ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕೇರಳ ಮಾತ್ರವಲ್ಲದೆ ಕರ್ನಾಟಕ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಮತ್ತು ಪುದುಶ್ಶೇರಿಗಳಲ್ಲೂ ಗುಡುಗು ಸಹಿತ ಮಳೆ ಉಂಟಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ ಮಾತ್ರವಲ್ಲದೆ ಗಂಟೆಗೆ ೫ ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇತೆ ಎಂದು ತಿಳಿಸಿದೆ.