ತಿರುವನಂತಪುರ: ಅರಬೀ ಸಮುದ್ರದಲ್ಲಿ ವಾಯುಭಾರ ಕುಸಿದಿದ್ದು, ಇದರಿಂದಾಗಿ ರಾಜ್ಯದ ಹಲವೆಡೆಗಳಲ್ಲಿ ಕಾರ್ಮೋಡಗಳು ರೂಪುಗೊಂಡಿವೆ. ಇನ್ನೊಂದೆಡೆ ಬಂಗಾಳಕೊಲ್ಲಿಯ ಆಳ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ಅದೂ ಇನ್ನೊಂದೆಡೆ ಕಾರ್ಮೋಡ ಕವಿಯುವಂತೆ ಮಾಡಿದೆ. ಇದರ ಪರಿಣಾಮ ಕೇರಳದಲ್ಲಿ ಭಾರೀ ಮಳ ಸುರಿಯುವ ಸಾಧ್ಯತೆ ಇದೆಯೆಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತದ ಹೊರತಾಗಿ ಸುಂಟರಗಾಳಿಯೂ ಬೀಸುವ ಸಾಧ್ಯತೆಯಿದೆ. ಅದರಿಂದಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಅತೀವ ಜಾಗ್ರತಾ ನಿರ್ದೇಶ ಘೋಷಿಸಲಾಗಿದೆ.
ಎರ್ನಾಕುಳಂ ಮತ್ತು ತೃಶೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಪತ್ತನಂತಿಟ್ಟ ಮತ್ತು ಕೋಟ್ಟಯಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋ ಷಿಸಲಾಗಿದೆ. ಆದ್ದರಿಂದ ರಾಜ್ಯದಾ ದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಅತೀವ ಜಾಗ್ರತಾ ನಿರ್ದೇಶ ನೀಡಲಾಗಿದೆ.
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ನಿರ್ದೇಶ ನೀಡ ಲಾಗಿದೆ. ತೀವ್ರ ಮಳೆಯಿಂದಾಗಿ ಮಲೆನಾಡು ಪ್ರದೇಶಗಳಲ್ಲಿ ಭೂಕುಸಿತ ಸಾಧ್ಯತೆಯೂ ಇದೆ. ತಗ್ಗುಪ್ರದೇಶಗಳು ನೆರೆನೀರಿನಿಂದ ಆವೃತವಾಗುವ ಸಾಧ್ಯತೆಯೂ ಇದ್ದ ಅದರಿಂದ ಅಂತಹ ಪ್ರದೇಶದವರು ಅತೀ ಹೆಚ್ಚಿನ ಜಾಗ್ರತೆ ಪಾಲಿಸಬೇಕೆಂದು ಇಲಾಖೆ ಹೇಳಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆಡುಂಬಾಶ್ಶೇರಿಯಿಂದ ಲಕ್ಷದ್ವೀಪ್ ನಡುವಿನ ವಿಮಾನ ಸೇವೆಯನ್ನು ರದ್ದುಪಡಿಸಲಾಗಿದೆ.







