ರಾಹುಲ್ ಗಾಂಧಿ ಇಂದು ರಾಜೀನಾಮೆ: ವಯನಾಡು ಪ್ರಿಯಾಂಕಾ ಗಾಂಧಿ ಸ್ಪರ್ಧೆ
ವಯನಾಡು: ವಯನಾಡು ಮತ್ತು ಉತ್ತರಪ್ರದೇಶದ ರಾಯ್ ಬರೇಲಿ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್ ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡು ವಯನಾಡು ಲೋಕಸಭಾ ಕ್ಷೇತ್ರದ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಇದರಿಂದ ತೆರವುಗೊಳ್ಳುವ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾರನ್ನು ಕಣಕ್ಕಿಳಿಸಲು ಕಾಂಗ್ರೆಸ್ ತೀರ್ಮಾ ನಿಸಿದೆ. ರಾಹುಲ್ ಗಾಂಧಿ ಇಂದು ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿ ದ್ದಾರೆ. ಇದರಿಂದ ತೆರವುಗೊಳ್ಳುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿ ದ್ದಾರೆಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ. ಓರ್ವ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದಲ್ಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡ ದಿನದಿಂದ ೧೪ ದಿನಗಳೊಳಗಾಗಿ ಆ ಪೈಕಿ ಒಂದು ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ. ಈ ಅವಧಿಯೊಳಗಾಗಿ ಒಂದು ವೇಳ ರಾಜೀನಾಮೆ ನೀಡದೆ ಇದ್ದಲ್ಲಿ ಅವರು ತಮ್ಮ ಗೆದ್ದ ಎರಡೂ ಲೋಕಸಭಾ ಸ್ಥಾನಗಳನ್ನೂ ಕಳೆದುಕೊಳ್ಳಲಿದ್ದಾರೆ.