ರೈಲು ಹಳಿಯಲ್ಲಿ ಪತ್ತೆಯಾದ ವ್ಯಕ್ತಿಯ ಗುರುತು ಪತ್ತೆ
ಕಾಸರಗೋಡು: ನವೆಂಬರ್ ೧೫ರಂದು ಕಾಸರಗೋಡು ನೆಲ್ಲಿಕುಂಜೆ ರೈಲು ಹಳಿಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗಿದೆ. ಮೃತರನ್ನು ಮೂಲತಃ ಪತ್ತನಂತಿಟ್ಟ ನಿವಾಸಿ ಹಾಗೂ ಈಗ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದ ಬಳಿ ವಾಸಿಸುತ್ತಿದ್ದ ಜಯಕುಮಾರ್ (54) ಎಂದು ಗುರುತಿಸಲಾಗಿದೆ. ಇವರು ರಬ್ಬರ್ ಟಾಪಿಂಗ್ ಕಾರ್ಮಿಕರೂ ಆಗಿದ್ದರು. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅವರು ರೈಲಿನಿಂದ ಹೊರಕ್ಕೆಸೆಯಲ್ಪಟ್ಟು ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.