ಲಾಲ್‌ಭಾಗ್- ಕುರುಡಪದವು ರಸ್ತೆ ಶೋಚನೀಯಾವಸ್ಥೆ ಪ್ರತಿಭಟಿಸಿ ಸ್ಥಳೀಯರಿಂದ ಲೋಕೋಪಯೋಗಿ ಇಲಾಖೆ ಕಚೇರಿ ಪ್ರತಿಭಟನೆ
ಪೈವಳಿಕೆ: ಪಂಚಾಯತ್‌ನ ಲಾಲ್‌ಭಾಗ್‌ನಿಂದ ಕುರುಡಪದವುವರೆಗೆ ಸಾಗುವ ಲೋಕೋಪಯೋಗಿ ಇಲಾಖೆಯ ರಸ್ತೆ ಹಲವು ವರ್ಷಗಳಿಂದ ಶೋಚನೀಯಾವಸ್ಥೆಯಲ್ಲಿದ್ದು, ವಾಹನ ಸಂಚಾರಕ್ಕೆ ಸಂಕಷ್ಟ ಅನುಭವಿಸುತ್ತಿದ್ದರೂ ಅಧಿಕಾರಿಗಳು ದುರಸ್ತಿ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಸ್ಥಳೀಯರು ನಿನ್ನೆ ಮಂಜೇಶ್ವರ ಲೋಕೋಪಯೋಗಿ ಇಲಾಖೆ ಕಚೇರಿಗೆ ಮಾರ್ಚ್ ನಡೆಸಿದರು. ಬಳಿಕ ಅಧಿಕಾರಿಗಳಿಗೆ ಮನವಿ ನೀಡಲಾಯಿತು.
ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ರಸ್ತೆಯನ್ನು ಶೀಘ್ರ ದುರಸ್ತಿಗೊಳಿಸುವ ಭರವಸೆ ನೀಡಿದ್ದು, ಹೊಂಡಗಳಿಗೆ ಜಲ್ಲಿ ಹುಡಿ ಹಾಕಿ ತಾತ್ಕಾಲಿಕ ದುರಸ್ತಿ ಹಾಗೂ ಮತ್ತೆ ಅಭಿವೃದ್ಧಿ ಕಾಮಗಾರಿ ಆರಂಭಿಸುವ ಬಗ್ಗೆ ಭರವಸೆ ನೀಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಸಂಚರಿಸುವ ಬಸ್‌ಗಳು ಹಾಗೂ ವಿವಿಧ ವಾಹನಗಳ ಸಂಚಾರ ಮೊಟಕುಗೊಳಿ ಸಲಾಗಿತ್ತು. ವಿವಿಧ ಕ್ಲಬ್‌ಗಳು, ವಿವಿಧ ಪಕ್ಷಗಳ ಮುಖಂಡರು ಸಹಿತ ಸ್ಥಳೀ ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.