ವಂದೇ ಭಾರತ್ ರೈಲು ಢಿಕ್ಕಿಹೊಡೆದು ಅಪರಿಚಿತ ಸಾವು

 ಕಾಸರಗೋಡು: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಾಡಿ ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.

ಹೊಸದುರ್ಗ ರೈಲು ನಿಲ್ದಾಣ ಬಳಿ ನಿನ್ನೆ ಈ ಘಟನೆ ನಡೆದಿದೆ. ಮೃತವ್ಯಕ್ತಿ ಪುರುಷನಾಗಿದ್ದು, ಸುಮಾರು ೫೦ ವರ್ಷ ಪ್ರಾಯ ಅಂದಾಜಿಸಲಾಗಿ ದೆಯೆಂದು ಪೊಲೀಸರು ತಿಳಿಸಿದ್ದಾರೆ. ಮೃತದೇಹವನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಹೊಸದುರ್ಗ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page