ವಾಮನ್ ರಾವ್ ಬೇಕಲ್‌ರಿಗೆ ಗೌರವ ಡಾಕ್ಟರೇಟ್
ಕಾಸರಗೋಡು: ಕಾಸರಗೋಡು ಸೀತಮ್ಮ ಪುರುಷ ನಾಯಕ ಸ್ಮಾರಕ, ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯದ ಸಂಸ್ಥಾಪಕ ಅಧ್ಯಕ್ಷ ವಾಮನ್ ರಾವ್ ಬೇಕಲ್ ಅವರಿಗೆ ತಮಿಳುನಾಡಿನ ಹೊಸೂರುನಲ್ಲಿರುವ ಏಶಿಯಾ ಇಂಟರ್ ನೇಶನಲ್ ಕಲ್ಚರ್ ರಿಸರ್ಚ್ ಯುನಿವರ್ಸಿಟಿ ಗೌರವ ಡಾಕ್ಟರೇಟ್ ನೀಡುವುದಾಗಿ ತಿಳಿಸಿದೆ. ಇಂದು ಹೊಸೂರ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು. ವಾಮನ್ ರಾವ್ ಅವರು ಕಾಸರಗೋಡಿನಲ್ಲಿ ಎರಡು ದಶಕಗಳಿಂದ ನಡೆಸುತ್ತಿರುವ ಕನ್ನಡ ಪರ ಸೇವೆ, ಸಾಮಾಜಿಕ, ಧಾರ್ಮಿಕ ಚಟುವಟಿಕೆಯನ್ನು ಪರಿಗಣಿಸಿ ಸೋಶಿಯಲ್ ಸರ್ವಿಸ್ ವಿಭಾಗದಲ್ಲಿ ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.