ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಮೋದಿಗೆ ಮತ್ತೆ ನಂ.೧ ಪಟ್ಟ
ನವದೆಹಲಿ: ಅಮೆರಿಕ ಮೂಲದ ಕನ್ಸಲ್ಟೆನ್ಸಿ ಸಂಸ್ಥೆ ಮಾರ್ನಿಂಗ್ ಕನ್ಸಲ್ಟ್ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಆಯ್ಕೆಗೊಂಡಿದ್ದಾರೆ.
ಸಮೀಕ್ಷೆಯಲ್ಲಿ ನರೇಂದ್ರ ಮೋದಿ ಶೇ. ೭೬ ರಷ್ಟು ಅನುಮೋದಿತ ರೇಟ್‌ನೊಂದಿಗೆ ವಿಶ್ವದ ಅತ್ಯಂತ ನಂ. ೧ ಜನಪ್ರಿಯ ನಾಯಕನಾಗಿ ಮೂಡಿ ಬಂದಿದ್ದಾರೆ. ಮೆಕ್ಸಿಕನ್ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಾಡಾರ್ (ಶೇ. ೬೬), ಸ್ವಿಟ್ಜರ್‌ಲ್ಯಾಂಡ್ ಅಧ್ಯಕ್ಷ ಅಲೈನ್ ಜೆರ್ಸೆಟ್ (ಶೇ. ೫೮), ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೋ ಲುಲಾ ಡಾ ಸಿಲ್ವಾ (ಶೇ. ೪೯) ನಂತರದ ಸ್ಥಾನದಲ್ಲಿದ್ದಾರೆ. ಇಟೆಲಿ ಪ್ರಧಾನಿ ಜಿಯೋರ್ಜಿಯಾ ಮೆಲೋನಿ ಶೇ. ೪೧ ಮತ್ತು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಶೇ. ೪೦ರಷ್ಟು ರೇಟಿಂಬ್‌ನೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ.