ವ್ಯಕ್ತಿ ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದು ಸಾವು
ಪೆರ್ಲ: ವ್ಯಕ್ತಿಯೊಬ್ಬರು ಮನೆಯ ಸಿಟೌಟ್‌ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಲ್ಕ ಬಿರ್ಮೂಲೆಯ ಅಮ್ಮು ಪೂಜಾರಿ (75) ಎಂಬವರು ಸಾವಿಗೀಡಾದ ವ್ಯಕ್ತಿ. ನಿನ್ನೆ ಮಧ್ಯಾಹ್ನ 12.30ರ ವೇಳೆ ಇವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಮನೆಯವರು ಆಸ್ಪತ್ರೆಗೆ ಕೊಂಡೊಯ್ದರೂ ಜೀವ ರಕ್ಷಿಸಲಾಗಲಿಲ್ಲ. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸ್ವ-ಗೃಹಕ್ಕೆ ಕೊಂಡೊಯ್ದು ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ಪತ್ನಿ ಸುಮತಿ, ಮಕ್ಕಳಾದ ಜಯೇಶ್, ಅಶ್ವಿನಿ, ಅನಿತಾ, ವೀಣಾ, ಅಳಿಯಂದಿರಾದ ರಮೇಶ್, ಸಂತೋಷ್, ಸಹೋದರಿಯರಾದ ಚೋಮು, ಪದ್ಮಾವತಿ, ರತ್ನ, ಕಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.