ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಯುವಕ ಸೆರೆ
ಕಾಸರಗೋಡು: ಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ಯುವಕನನ್ನು ಹೊಸದುರ್ಗ ಪೊಲೀಸರು ಬಂಧಿಸಿದ್ದಾರೆ. ಚೆಮ್ನಾಡ್ ನಿವಾಸಿ ತಸ್ರೀಫ್ (೧೯) ಬಂಧಿತನಾದ ಆರೋಪಿ.
೧೫ ವರ್ಷದ ಶಾಲಾ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋ ಪಿಸಿ ನೀಡಲಾದ ದೂರಿನಂತೆ ಆರೋಪಿ ವಿರುದ್ಧ ಪೊಲೀಸರು ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದರು. ಅದಕ್ಕೆ ಸಂಬಂಧಿಸಿ ಆತನನ್ನು ಬಂಧಿಸಲಾಗಿದೆ.