ಶಾಲೆಗೆ ಹೋದ ವಿದ್ಯಾರ್ಥಿನಿ ನಾಪತ್ತೆ: ದೂರು
ಮಂಜೇಶ್ವರ: ಶಾಲೆಗೆ ಹೋದ 17ರ ಹರೆಯದ ವಿದ್ಯಾರ್ಥಿನಿ ನಾಪತ್ತೆಯಾದ ಬಗ್ಗೆ ದೂರಲಾಗಿದೆ. ಈ ಬಗ್ಗೆ ತಾಯಿ ನೀಡಿದ ದೂರಿನಂತೆ ಕೇಸು ದಾಖಲಿಸಿಕೊಂಡ ಮಂಜೇಶ್ವರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಉಪ್ಪಳ ಸಮೀಪ ವಾಸಿಸುವ ವಿದ್ಯಾ ರ್ಥಿನಿ ನಾಪತ್ತೆಯಾಗಿರುವು ದಾಗಿ ದೂರಿನಲ್ಲಿ ತಿಳಿಸಲಾಗಿದೆ. ನಿನ್ನೆ ಶಾಲೆಗೆ ತೆರಳಿದ ವಿದ್ಯಾರ್ಥಿನಿ ಮರಳಿ ಬಾರದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.