ಶ್ರೀ ಧರ್ಮಸ್ಥಳದಿಂದ ಮೋಪಾಲ ಕ್ಷೇತ್ರಕ್ಕೆ ಧನಸಹಾಯ

ಬದಿಯಡ್ಕ: ಜೀರ್ಣೋದ್ಧಾರ ಗೊಳ್ಳುತ್ತಿರುವ ಎಡನೀರು ಸಮೀಪದ ಮೋಪಾಲ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮದರ್ಶಿ ಡಾ. ಡಿ. ವೀರೇಂದ್ರ ಹೆಗ್ಗಡೆ ನೀಡಿದ ಐದು ಲಕ್ಷ ರೂಪಾಯಿಗಳನ್ನು ಹಸ್ತಾಂತರಿಸಲಾಯಿತು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರ ಗೋಡು ಜಿಲ್ಲಾ ಯೋಜನಾಧಿಕಾರಿ ಮುಖೇಶ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನವೀನ್ ಕುಮಾರ್ ಭಟ್, ಕುಂಜರಕಾನ ಅವರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ  ಕಾರ್ಯದರ್ಶಿ ಕೆ.ಎಂ. ಶರ್ಮ ಎಡನೀರು, ವಾಮನ ಆಚಾರ್ಯ ಬೋವಿಕ್ಕಾನ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ, ಸದಸ್ಯರು ಜೊತೆಗಿದ್ದರು.

You cannot copy contents of this page