ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರಿಗೆ ಅಭ್ಯಾಸವರ್ಗ

ಬದಿಯಡ್ಕ: ಸಹಕಾರ ಭಾರತಿಯ ಕಾಸರಗೋಡು ತಾಲೂಕು ಸಮಿತಿಯ ನೇತೃತ್ವದಲ್ಲಿ ಸಹಕಾರಿ ಬ್ಯಾಂಕ್‌ಗಳ ನಿರ್ದೇಶಕರಿಗೆ ಏಕದಿನ ಅಭ್ಯಾಸವರ್ಗ ನೀರ್ಚಾಲು ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರಗಿತು. ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷ ಜಯದೇವ ಖಂಡಿಗೆ ಉದ್ಘಾಟಿಸಿದರು. ಸಹಕಾರ ಭಾರತಿ ಜಿಲ್ಲಾ ಅಧ್ಯಕ್ಷ ಪದ್ಮರಾಜ ಪಟ್ಟಾಜೆ ಅಧ್ಯಕ್ಷತೆ ವಹಿಸಿದರು. ರಾಜ್ಯ ಸಮಿತಿ ಸದಸ್ಯ ಐತ್ತಪ್ಪ ಮವ್ವಾರು, ರಾಜ್ಯ ಕಾರ್ಯದರ್ಶಿ ಗಣೇಶ್ ಪಾರೆಕಟ್ಟೆ, ಜಿಲ್ಲಾ ಸಂಘಟನಾ ಪ್ರಮುಖ್ ಅಶೋಕ್ ಬಾಡೂರು ಮಾತನಾಡಿ ದರು. ತಾಲೂಕು ಕಾರ್ಯದರ್ಶಿ ಗಣಪತಿ ಪ್ರಸಾದ ಕುಳಮರ್ವ ಸ್ವಾಗತಿಸಿ, ಪೆರಡಾಲ ಬ್ಯಾಂಕ್ ಉಪಾಧ್ಯಕ್ಷ ಅವಿನಾಶ್ ವಂದಿಸಿದರು. ನಿವೃತ್ತ ಸಹಕಾರಿ ಸ್ಪೆಷಲ್ ಗ್ರೇಡ್ ಇನ್ಸ್‌ಪೆಕ್ಟರ್ ಶಿವಪ್ರಸಾದ್ ಸಂಪನ್ಮೂಲ ವ್ಯಕ್ತಿಯಾಗಿದ್ದು, ತರಗತಿ ನಡೆಸಿದರು.

ಸಮಾರೋಪ ಸಮಾರಂಭದಲ್ಲಿ ಸಹಕಾರ ಭಾರತಿ ರಾಜ್ಯ ಅಧ್ಯಕ್ಷ ಕರುಣಾಕರನ್ ನಂಬ್ಯಾರ್ ಮಾತನಾಡಿದರು. ರಾಜ್ಯ ಉಪಾಧ್ಯಕ್ಷ ಅರವಿಂದಾಕ್ಷನ್ ಕಣ್ಣೂರು ಶುಭ ಕೋರಿದರು.

RELATED NEWS

You cannot copy contents of this page