ಸಾಂಸ್ಕೃತಿಕ ಸಿರಿಬಾಗಿಲು ಯಕ್ಷವೈಭವ ಉದ್ಘಾಟನೆ
ಸಿರಿಬಾಗಿಲು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಂಸ್ಥೆಯು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋ ಗದೊಂದಿಗೆ ಕಲಾಪೋಷಕರ ಸಹಕಾರದೊಂದಿಗೆ ನಾಲ್ಕು ದಿನಗಳ ಕಾಲ ನಡೆಯಲಿರುವ ಸಾಂಸ್ಕೃತಿಕ ಉತ್ಸವ ಸಿರಿಬಾಗಿಲು ಯಕ್ಷವೈಭವ ವನ್ನು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದೀಪಬೆಳಗಿಸಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾ ಡಿದ ಶ್ರೀಗಳು ಸಿರಿಬಾಗಿಲು ಪ್ರತಿ ಷ್ಠಾನವು ಕಾಸರಗೋಡಿನಲ್ಲಿ ಯಕ್ಷಗಾನ, ಕನ್ನಡ ಭಾಷೆ ಹಾಗೂ ಸಂಸ್ಖೃತಿಯ ಉಳಿವಿಗೆ ನೀಡುತ್ತಿರುವ ಕೊಡುಗೆ ಅಪಾರವಾದುದು. ಮೂವ ತ್ತಕ್ಕೂ ಹೆಚ್ಚು ಹವ್ಯಾಸಿ ತಂಡಗಳಿಗೆ ಯಕ್ಷಗಾನ ಪ್ರದರ್ಶನ ನೀಡಲು ವೇದಿಕೆ ಕಲ್ಪಿಸಿ ಪ್ರೋತ್ಸಾಹಿಸುತ್ತಿರುವುದು ಅತ್ಯುತ್ತಮ ಕೆಲಸ ಎಂದು ಶ್ಲಾಘಿಸಿದರು.
ಕರ್ನಾಟಕ ಗಡಿಪ್ರದೇಶ ಆಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆ ವಹಿಸಿದರು.
ಮುಖ್ಯಅತಿಥಿಯಾಗಿ ಭಾಗವಹಿ ಸಿದ್ದ ಕಲಾಪೋಷಕ ಹಾಗೂ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರು ಪ್ರತಿಷ್ಠಾನದ ಗೌರವ ಸದಸ್ಯತ್ವವವನ್ನು ಶ್ರೀಗಳ ಕೈಯಿಂದ ಸ್ವೀಕರಿಸಿದರು.
ಕರ್ನಾಟಕ ಗಡಿಪ್ರದೇಶ ಆಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ್ ಮತ್ತಿಹಳ್ಳಿ, ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸತೀಶ ಅಡಪ ಸಂಕಬೈಲು. ಕರ್ನಾಟಕ ಗಡಿಪ್ರದೇಶ ಆಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ.ಆರ್.ಸುಬ್ಬಯ್ಯ ಕಟ್ಟೆ ಭಾಗವಹಿಸಿದ್ದರು. ಸಿರಿಬಾಗಿಲು ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಸಿರಿಬಾಗಿಲು ಸ್ವಾಗತಿಸಿ, ಜಗದೀಶಕೂಡ್ಲು ನಿರ್ವಹಿಸಿ, ಪ್ರಸನ್ನ ಕಾರಂತ ದೇಶಮಂಗಲ ವಂದಿಸಿದರು.