ಸುಪ್ರೀಂಕೋರ್ಟ್‌ನಲ್ಲಿ ವಕ್ಫ್ ಪ್ರಕರಣದ ವಿಚಾರಣೆ ಇಂದಿನಿಂದ

ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆ 2025ರ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿ ರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇಂದಿನಿಂದ ಆರಂಭ ಗೊಳ್ಳಲಿದೆ.  ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಕ್‌ರನ್ನೊಳಗೊಂಡ ಸುಪ್ರೀಂಕೋರ್ಟ್‌ನ ವಿಭಾಗಿಯ ಪೀಠದಲ್ಲಿ ಇದರ ವಿಚಾರಣೆ ನಡೆಯಲಿದೆ.  ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಂತರ ಆದೇಶಗಳನ್ನು ಹೊರಡಿಸುವ ಸಾಧ್ಯತೆಯೂ ಇದೆ. ಮೇ 15ರಂದು ವಿಚಾರಣೆ ಆರಂಭಿಸಲು ಈ ಹಿಂದೆ ತೀರ್ಮಾನಿಸಲಾಗಿತ್ತು. ನಂತರ ಅದನ ಸುಪ್ರೀಂಕೋರ್ಟ್ ಇಂದಿಗೆ ಮುಂದೂಡಿತ್ತು. ನ್ಯಾಯಾಲಯಗಳು ವಕ್ಫ್ ಎಂದು ಘೋಷಿಸಿದ ಆಸ್ತಿಗಳನ್ನು ಡಿನೋಟಿಫೈ ಮಾಡುವ ಅಧಿಕಾರ ಸೇರಿದಂತೆ ಮೂರು ವಿಷಯಗಳ ಬಗ್ಗೆ ಮಧ್ಯಂತರ ನಿರ್ದೇಶಗಳನ್ನು ನೀಡುವ ವಾದಗಳನ್ನು ಆಲಿಸುವುದಾಗಿ ಸುಪ್ರೀಂಕೋರ್ಟ್ ತಿಳಿಸಿದೆ.

ವಕ್ಪ್ ತಿದ್ದುಪಡಿ ಕಾನೂನನ್ನು ವಿರೋಧಿಸಿ ೫೦ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂಕೋರ್ಟ್‌ಗೆ ಸಲ್ಲಿಸಲ್ಪಟ್ಟಿವೆ. ಆ ವಿಷಯದಲ್ಲಿ ಸುಪ್ರೀಂಕೋರ್ಟ್ ಕೇಂದ್ರ ಸರಕಾರದ ಅಭಿಪ್ರಾಯವನ್ನು ಕೇಳಿತ್ತು. ಆದರೆ ಕೇಂದ್ರ ಸರಕಾರ ತನ್ನ ನಿಲುವಿಗೆ ಸಮರ್ಥನೆ ನೀಡಿದೆ.

Leave a Reply

Your email address will not be published. Required fields are marked *

You cannot copy content of this page