ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ
ಮಂಜೇಶ್ವರ: ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹೊಸಂಗಡಿ ಯಲ್ಲಿರುವ ಸುರಕ್ಷಾ ದಂತ ಚಿಕಿತ್ಸಾಲ ಯದಲ್ಲಿ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ನಿನ್ನೆ ನಡೆಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ಡಾ. ರಾಜಶ್ರೀ ಮೋಹನ್ ಚೂಂತಾರು ಮತ್ತು ಬಾಯಿ ಮುಖ ದವಡೆ ಶಸ್ತ್ರ ಚಿಕಿತ್ಸಕ ಡಾ| ಮುರಲೀ ಮೋಹನ್ ಚೂಂತಾರು ನೇತೃತ್ವ ನೀಡಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ ಮಂಗಳೂರು ಮತ್ತು ಸುರಕ್ಷಾ ದಂತ ಚಿಕಿತ್ಸಾಲಯದ ಆಶ್ರಯ ದಲ್ಲಿಶಿಬಿರ ನಡೆದಿದೆ.
ಈ ಸಂದರ್ಭದಲ್ಲಿ ಮಾತನಾಡಿದ ಡಾ| ಚೂಂತಾರು, ತಂಬಾಕು ಉತ್ಪನ್ನ ಸೇವಿಸುವ ೯೦ ಶೇಕಡಾ ಮಂದಿ ಕ್ಯಾನ್ಸರ್‌ಗೆ ತುತ್ತಾಗುತ್ತಿದ್ದಾರೆ ಎಂದು ಅಂಕಿ ಅಂಶಗಳಿಂದ ಸಾಬೀತಾಗಿದೆ. ಆದರೂ ಜನರು ತಂಬಾಕು ಸೇವಿಸಿ ಸಾವಿಗೆ ಆಹ್ವಾನ ನೀಡುವುದು ವಿಷಾದನೀಯ ಎಂದು ತಿಳಿಸಿದರು.
ರೋಗಿಗಳಿಗೆ ಡಾ| ಚೂಂತಾರು ಬರೆದ ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಉಚಿತವಾಗಿ ಹಂಚಲಾಯಿತು. ಸುರಕ್ಷಾ ದಂತ ಚಿಕಿತ್ಸಾಲಯದ ರಮ್ಯಾ, ಚೈತ್ರ, ಸುಶ್ಮಿತಾ ಹಾಗೂ ಜಯಶ್ರೀ ಉಪಸ್ಥಿತರಿದ್ದರು.