ಸೆಕ್ರೆಟರಿಯೇಟ್ ಮುಂದೆ ಸತ್ಯಾಗ್ರಹ ಆಶಾ ಕಾರ್ಯಕರ್ತೆಯರ ವಿರುದ್ಧ ಕೇಸು
ತಿರುವನಂತಪುರ: ರಾಜ್ಯದ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಮುಂದಿರಿಸಿಕೊಂಡು ಸೆಕ್ರೆಟರಿಯೇಟ್ ಮುಂದೆ ಅನಿರ್ಧಿ ಷ್ಟಾವಧಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದೇ ವೇಳೆ ಸತ್ಯಾಗ್ರಹ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ವಿರುದ್ಧ ಗಲಭೆಗೆ ಆಹ್ವಾನ ಸಹಿತ ಆರೋಪ ಹೊರಿಸಿ ಪೊಲೀಸರು ಕೇಸು ದಾಖಲಿಸಿಕೊಂಡಿರುವುದಾಗಿ ಹೇಳಲಾಗುತ್ತಿದೆ. ಕೇರಳ ಆಶಾ ಹೆಲ್ತ್ ವರ್ಕರ್ಸ್ ಅಸೋಸಿಯೇಶನ್ ರಾಜ್ಯ ಅಧ್ಯಕ್ಷ ವಿ.ಕೆ. ಸದಾನಂದನ್, ಪ್ರಧಾನ ಕಾರ್ಯದರ್ಶಿ ಎಂ.ಎ ಬಿಂದು ಸಹಿತ ೧೫೦ರಷ್ಟು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.