ಸೊಂದಿ ಶ್ರೀ ವಿಷ್ಣುಮೂರ್ತಿ ಕ್ಷೇತ್ರ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ನಾಳೆ
ಜೋಡುಕಲ್ಲು: ಕಯ್ಯಾರು ಸೊಂದಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ನಾಳೆ ಬೆಳಿಗ್ಗೆ ೯.೩೦ಕ್ಕೆ ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ವಸಂತ ಪೈ ಬದಿಯಡ್ಕ ಬಿಡುಗಡೆಗೊಳಿಸುವರು. ಸಮಿತಿಯ ಅಧ್ಯಕ್ಷ ಜಯರಾಮ ಸಾಂತ ಸಣ್ಣಡ್ಕ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ಅಧ್ಯಕ್ಷ ಡಾ. ಶ್ರೀಧರ ಭಟ್ ಉಪ್ಪಳ, ಪ್ರಧಾನ ಕಾರ್ಯದರ್ಶಿ ವೆಂಕಪ್ಪ ಶೆಟ್ಟಿ, ಮೊಕ್ತೇಸರ ಪ್ರಭಾಕರ ಹೊಳ್ಳ ಹಾಗೂ ಇತರ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿರುವರು.