ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 34 ಲೀಟರ್ ಮದ್ಯ ವಶ: ಓರ್ವ ಸೆರೆ
ಕಾಸರಗೋಡು: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 34 ಲೀಟರ್ ಕರ್ನಾಟಕ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಸ್ಕೂಟರ್ ಸವಾರನನ್ನು ಬಂಧಿಸಿದ್ದಾರೆ. ಬೆದ್ರಡ್ಕ ಕಿನ್ನಿಗೋಳಿಯ ಸುರೇಶ್ ಬಿ.ಪಿ ಎಂಬಾತ ಬಂಧಿತ ವ್ಯಕ್ತಿಯೆಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಿಗ್ಗೆ ಉಳಿಯತ್ತಡ್ಕದಲ್ಲಿ ಎಕ್ಸೈಸ್ ಎನ್‌ಫೋರ್ಸ್‌ಮೆಂಟ್ ಆಂಡ್ ನಾರ್ಕೋಟಿಸ್ ಸ್ಪೆಷಲ್ ಸ್ಕ್ವಾಡ್‌ನ ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ ಶ್ರೀನಿವಾಸನ್ ಪತ್ತಿಲು ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆ ವೇಳೆ ಮದ್ಯ ಸಾಗಾಟ ಪತ್ತೆಹಚ್ಚಲಾಗಿದೆ.