ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಗಾಂಜಾ ವಶ: ಓರ್ವ ಸೆರೆ
ಕುಂಬಳೆ: ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 140 ಗ್ರಾಂ ಗಾಂಜಾ ಸಹಿತ ಓರ್ವನನ್ನು ಕುಂಬಳೆ ಎಸ್‌ಐ ಪ್ರದೀಪ್ ಕುಮಾರ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ.
ಸೀತಾಂಗೋಳಿ ದರ್ಬೆತ್ತಡ್ಕ ನಿವಾಸಿ ಮೊಹಮ್ಮದ್ ಹನೀಫ್ (40) ಬಂಧಿತ ಆರೋಪಿ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿಯವರ ಸ್ಪೆಷಲ್ ಸ್ಕ್ವಾಡ್‌ನ ಸಹಾಯ ದೊಂದಿಗೆ ಸೀತಾಂಗೋಳಿ ಕಿನ್ಫ್ರಾ -ಕಣ್ಣೂರು ರಸ್ತೆ ಬಳಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಮಾಲು ಸಹಿತ ಸೆರೆಹಿಡಿದು ಕೇಸು ದಾಖಲಿಸಲಾಗಿದೆ.