ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯ ವಶ: ಓರ್ವ ಸೆರೆ
ಕುಂಬಳೆ: ಕೊಯಿಪ್ಪಾಡಿ ಗ್ರಾಮದ ಕಳತ್ತೂರು ತಪಾಸಣಾ ಕೇಂದ್ರ ಬಳಿ ಕಾಸರಗೋಡು ಎಕ್ಸೈಸ್ ಸ್ಪೆಷಲ್ ಸ್ಕ್ವಾಡ್‌ನ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಸಿ.ಕೆ.ವಿ. ಸುರೇಶ್ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಸ್ಕೂಟರ್‌ನಲ್ಲಿ ಸಾಗಿಸುತ್ತಿದ್ದ 15.57 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ವಶಪಡಿಸಿಕೊಂಡಿದೆ.
ಇದಕ್ಕೆ ಸಂಬಂಧಿಸಿ ಕಿದೂರು ನಿವಾಸಿ ಹರಿಪ್ರಸಾದ್ (19) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಅಸಿಸ್ಟೆಂಟ್ ಎಕ್ಸೈಸ್ ಇನ್‌ಸ್ಪೆಕ್ಟರ್ (ಗ್ರೇಡ್) ಮುರಳಿ ಕೆ.ವಿ, ಪ್ರಿವೆಂಟೀವ್ ಆಫೀ ಸರ್ ಸತೀಶನ್, ಧನ್ಯಾ ಎಂಬವರು ಈ ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಒಳಗೊಂಡಿದ್ದರು.