ಹೇಮಾ ಸಮಿತಿ ವರದಿ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಕೊಚ್ಚಿ: ಕೇರಳ ಸಿನಿಮಾ ಉದ್ದಿಮೆಯನ್ನು ಕೇಂದ್ರೀಕರಿಸಿ ನಡೆಯುತ್ತಿರುವ ಲೈಂಗಿಕ ಶೋಷಣೆ ಕುರಿತಾದ ಹೇಮಾ ಸಮಿತಿ ವರದಿ ವಿಷಯದಲ್ಲಿ ರಾಜ್ಯ ಹೈಕೋರ್ಟ್ ರಾಜ್ಯ ಸರಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಈ ವರದಿಗೆ ಸಂಬಂಧಿಸಿ  ರಾಜ್ಯ ಸರಕಾರ ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದ ಹೈಕೋರ್ಟ್ ಕ್ರಮ ಕೈಗೊಳ್ಳುವ ವಿಷಯದಲ್ಲಿ  ವಿಳಂಬ  ಕಂ ಗೆಡಿಸುವಂತಾಗಿದೆಯೆಂದು ನ್ಯಾಯಾಲಯ ಹೇಳಿದೆ. ಹೇಮಾ ಸಮಿತಿ ಸರಕಾರಕ್ಕೆ ವರದಿ ಸಲ್ಲಿಸಿ ೩ ವರ್ಷಗಳಾದರೂ ಅದಕ್ಕೆ ಹೊಂದಿಕೊಂಡು ಸರಕಾರ ಸೂಕ್ತ ಕ್ರಮ ಕೈಗೊಳ್ಳದಿರಲು ಕಾರಣ ವೇನೆಂದು ನ್ಯಾಯಾಲಯ ಪ್ರಶ್ನಿಸಿದೆ.

ತನಿಖೆಗಾಗಿ ವಿಶೇಷ ತಂಡವನ್ನು ನೇಮಿಸಲಾಗಿದೆಯೆಂದು ಸರಕಾರದ ಪರ ಅಡ್ವಕೇಟ್ ಜ ರಲ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You cannot copy content of this page