೪೦ ಲೀಟರ್ ಕರ್ನಾಟಕ ಮದ್ಯ ಪತ್ತೆ: ಓರ್ವ ಸೆರೆ
ಕಾಸರಗೋಡು: ಕೂಡ್ಲಿನಲ್ಲಿ ಕಾಸರಗೋಡು ಎಕ್ಸೈಸ್ ಎನ್ಫೋರ್ಸ್ಮೆಂಟ್ ಆಂಡ್ ಆಂಟಿ ನರ್ಕೋಟಿಕ್ಸ್ ಸ್ಪೆಷಲ್ ಸ್ಕ್ವಾಡ್ನ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಮುರಳಿ ಕೆ.ವಿ.ರ ನೇತೃತ್ವದ ತಂಡ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ೪೦.೬೮ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ಕೂಡ್ಲು ಶಿವಶಕ್ತಿ ನಗರದ ಅಶೋಕ್ ಕುಮಾರ್ (೫೨) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಪ್ರಿವೆಂಟಿವ್ ಆಫೀಸರ್ ಸಾಜನ್ ಎ, ಸಿವಿಲ್ ಎಕ್ಸೈಸ್ ಆಫೀಸರ್ಗಳಾದ ಪ್ರಜಿತ್ ಕೆ.ಆರ್, ಮಂಜುನಾಥ ವಿ, ಮಹಿಳಾ ಸಿವಿಲ್ ಎಕ್ಸೈಸ್ ಆಫೀಸರ್ ಮೈಮೋಳ್ ಜೋನ್ ಮತ್ತು ಚಾಲಕ ಕ್ರಿಸ್ಟಿನ್ ಪಿ.ಎ. ಎಂಬವರು ಒಳಗೊಂಡಿದ್ದರು.