೬೧.೬೦ ಲಕ್ಷ ರೂ. ಮೌಲ್ಯದ ಚಿನ್ನ ವಶ: ಚೆಂಗಳ ನಿವಾಸಿ ಸೆರೆ
ಕಾಸರಗೋಡು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ೬೧,೬೦,೦೫೦ ರೂ. ಮೌಲ್ಯದ ೧೦೫೩ ಗ್ರಾಂ ಚಿನ್ನ ಪತ್ತೆಹಚ್ಚಿ ವಶಪಡಿಸಲಾಗಿದೆ.
ಈ ಸಂಬಂಧ ಚೆಂಗಳ ನಿವಾಸಿ ಮೊಹಮ್ಮದ್ ಮುಸ್ತಫಾ ಅಬ್ದುಲ್ಲ ಎಂಬಾತನನ್ನು ಬಂಧಿಸಲಾಗಿದೆ. ಈತ ಅಬುದಾಬಿಯಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಮಂಗಳೂರು ನಿಲ್ದಾಣದಲ್ಲಿ ಬಂದಿಳಿದಿದ್ದನು. ಕಸ್ಟಮ್ಸ್ ತಂಡ ದೇಹ ತಪಾಸಣೆ ನಡೆಸಿದಾಗ ನಾಲ್ಕು ಚಿನ್ನದ ರೂಪದ ಮಾತ್ರೆಗಳನ್ನು ಆತನ ಗುದದ್ವಾರ ಬಳಿ ಬಚ್ಚಿಟ್ಟಿರುವುದು ಪತ್ತೆಯಾಗಿದೆ. ಅದರಂತೆ ಆತನನ್ನು ಸೆರೆಹಿಡಿದು ಮಾಲು ವಶಪಡಿಸಲಾಗಿ ದೆಯೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಆತನನ್ನು ಬಳಿಕ ನ್ಯಾಯಾಲಯದ ನಿರ್ದೇಶದಂತೆ ನ್ಯಾಯಂಗ ಬಂಧನದಲ್ಲಿರಿಸಲಾಗಿದೆ.