೯ರ ಹರೆಯದ ಬಾಲಕನಿಗೆ ಸಲಿಂಗರತಿ ಕಿರುಕುಳ ಪ್ರಕರಣ: ಆರೋಪಿಗೆ ೪೮ ವರ್ಷ ಸಜೆ, ಜುಲ್ಮಾನೆ
ಕಾಸರಗೋಡು: ಪರಿಶಿಷ್ಟ ವಿಭಾಗಕ್ಕೆ ಸೇರಿದ ಒಂಬತ್ತರ ಹರೆಯದ ಬಾಲಕನಿಗೆ ಸಲಿಂಗರತಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್‌ಟ್ರಾಕ್ ಸ್ಪೆಷಲ್ ನ್ಯಾಯಾಲಯ (ಪೋಕ್ಸೋ)ದ ನ್ಯಾಯಾಧೀಶರಾದ ಸಿ. ದೀಪು ಅವರು ಪೋಕ್ಸೋ ಹಾಗೂ ಐಪಿಸಿಯ ಇತರ ವಿವಿಧ ಸೆಕ್ಷನ್‌ಗಳಲ್ಲಾಗಿ ಒಟ್ಟು ೪೮ ವರ್ಷ ಸಜೆ ಹಾಗೂ ೫೦,೦೦೦ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ.
ವಣಿಯಾಡಿ ಕರಿವೇಡಗಂ ನಿವಾಸಿ ಮೊಹಮ್ಮದ್ ಹನೀಫಾ (೪೭) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಒಟ್ಟು ನೀಡಲಾದ ೪೮ ವರ್ಷಗಳ ಶಿಕ್ಷೆಯಲ್ಲಿ ೩೩ ವರ್ಷ ಕಠಿಣ ಸಜೆ ಮತ್ತು ೧೫ ವರ್ಷ ಸಾದಾ ಸಜೆ ಒಳಗೊಂಡಿದೆ. ಶಿಕ್ಷೆಯನ್ನು ಒಟ್ಟಿಗೆ ಅನುಭವಿಸಿದರೆ ಸಾಕು. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ೧೦ ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದೂ ತೀರ್ಪಿನಲ್ಲಿ ತಿಳಿಸಲಾಗಿದೆ.
೨೦೨೧ ಅಕ್ಟೋಬರ್ ತಿಂಗಳಲ್ಲಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ದಾಖಲಿಸಲಾಗಿತ್ತು. ಅಂದು ಎಸ್‌ಎಂಎಸ್ ಡಿವೈಎಸ್‌ಪಿ ಆಗಿದ್ದ ಕೆ.ಪಿ. ಸುರೇಶ್ ಬಾಬು ಅವರು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದರು. ಪ್ರೋಸಿಕ್ಯೂಷನ್ ಪರವಾಗಿ ಸ್ಪೆಷಲ್ ಪಬ್ಲಿಕ್ ಪ್ರೋಸಿಕ್ಯೂಟರ್ ಎ.ಕೆ. ಪ್ರಿಯಾ ಅವರು ನ್ಯಾಯಾಲಯದಲ್ಲಿ ವಾದಿಸಿದ್ದರು.