೯೯ ಲಕ್ಷ ರೂ. ಮೌಲ್ಯದ ಚಿನ್ನ ವಶ: ಓರ್ವ ಸೆರೆ

ಕಾಸರಗೋಡು: ಕಣ್ಣೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶದಿಂದ ಸಾಗಿಸಲಾದ ೧.೬ ಕಿಲೋ ಗ್ರಾಂ ಚಿನ್ನ ಪತ್ತೆಹಚ್ಚಿ ವಶಪಡಿಸಿಕೊಂಡಿದೆ.

ಇದಕ್ಕೆ ಸಂಬಂಧಿಸಿ ಹೊಸದುರ್ಗ ನಿವಾಸಿ ಹಿಸಾಮುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ. ಈತ ಶಾರ್ಜಾದಿಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನಲ್ಲಿ  ವಿಮಾನದಲ್ಲಿ  ಕಣ್ಣೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದನು. ಕಸ್ಟಮ್ಸ್ ತಂಡ ಆತನ ದೇಹ ತಪಾಸಣೆ ನಡೆಸಿದಾಗ ಐದು ಮಾತ್ರೆಗಳ ರೂಪದಲ್ಲಾಗಿದ್ದ ಚಿನ್ನವನ್ನು ಆತನ ದೇಹದಲ್ಲಿ ಬಚ್ಚಿಟ್ಟಿರುವುದನ್ನು ಪತ್ತೆಹಚ್ಚಿದ್ದಾರೆ. ಅದರಂತೆ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಯಿತೆಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

RELATED NEWS

You cannot copy contents of this page