1247 ಪ್ಯಾಕೆಟ್ ಕರ್ನಾಟಕ ಮದ್ಯ, ನಗದು ಪತ್ತೆ: ಆಟೋ ಸಹಿತ ಓರ್ವ ಸೆರೆ

ಕಾಸರಗೋಡು: ಕಾಸರಗೋಡು ಪೊಲೀಸರು ಕೂಡ್ಲು ಕಂಬಾರು ಜಂಕ್ಷನ್‌ನಲ್ಲಿ ನಿನ್ನೆ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ  ಆಟೋ ರಿಕ್ಷಾವೊಂದರಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 180 ಎಂಎಲ್‌ನ 1247೭ ಟೆಟ್ರಾ ಪ್ಯಾಕೆಟ್ ಕರ್ನಾಟಕ ಮದ್ಯ ಹಾಗೂ 750 ಎಂಎಲ್‌ನ 12 ಬಾಟಲಿ ಕರ್ನಾಟಕ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿ ಕೂಡ್ಲು ಬೆದ್ರಡ್ಕ ಕಿನ್ನಿಗೋಳಿ ಹೌಸ್‌ನ ಸುರೇಶ್ ಬಿ.ಪಿ (42) ಎಂಬಾತನನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಮಾತ್ರವಲ್ಲ ಮದ್ಯ ಸಾಗಿಸಲು ಉಪಯೋಗಿಸುತ್ತಿದ್ದ ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿಯನ್ನು ತಪಾಸಣೆಗೊಳ ಪಡಿಸಿದಾಗ ಆತನ ಕೈಯಲ್ಲಿ 22000 ರೂ. ನಗದು ಮತ್ತು ಮೊಬೈಲ್ ಫೋನ್ ಕೂಡಾ ಪತ್ತೆಯಾ ಗಿದ್ದು, ಅದನ್ನೂ ವಶಪಡಿಸಲಾಗಿದೆ.

ಮಾತ್ರವಲ್ಲ ಈ ಪ್ರಕರಣದ ಬಗ್ಗೆ ಇನ್ನೂ ಹೆಚ್ಚಿನ ತನಿಖೆ ನಡೆಸಲಾ ಗುವುದೆಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಈ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಅಲ್ಲಿ ಕಾರೊಂದು ಪತ್ತೆಯಾಗಿತ್ತೆಂದೂ ಪೊಲೀಸರನ್ನು  ಕಂಡಾಕ್ಷಣ ಆ ಕಾರಿನಲ್ಲಿದ್ದವರು ಕಾರು ಸಹಿತ ಅಲ್ಲಿಂದ ಪರಾರಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

You cannot copy contents of this page