14ರ ಬಾಲಕಿಗೆ ಕಿರುಕುಳ: ಆರೋಪಿ ಬಂಧನ

ಬದಿಯಡ್ಕ: ಬದಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ೧೪ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅರುಣ್ (34) ಎಂಬಾತ ಬಂಧಿತ ಆರೋಪಿ ಯೆಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮನೆಯವರೊಂದಿಗೆ ಉತ್ತಮ ಸೌಹಾರ್ದತೆಯಲ್ಲಿದ್ದ ಈತ ಹಲವು ಬಾರಿ ಬಾಲಕಿಗೆ ಕಿರುಕುಳ ನೀಡಿದ್ದನೆನ್ನಲಾಗಿದೆ. ಈತನ ಬೆದರಿಕೆಗೆ ಹೆದರಿ ಬಾಲಕಿ ಈ ವಿಷಯವನ್ನು ಯಾರಲ್ಲೂ ತಿಳಿಸಿರಲಿಲ್ಲ. ಶಾಲೆಯಲ್ಲಿ ನಡೆದ ಕೌನ್ಸಿಲಿಂಗ್‌ನಲ್ಲಿ ಬಾಲಕಿ ವಿಷಯ ತಿಳಿಸಿದ್ದಾಳೆ. ಈ ಬಗ್ಗೆ ಸಂಬಂಧಪಟ್ಟವರು ಪೊಲೀಸರಿಗೆ ದೂರು ನೀಡಿದ್ದರು. ಇದರಂತೆ ಪೋಕ್ಸೋ ಪ್ರಕಾರ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.

You cannot copy contents of this page